ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 653 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,82,131ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,790ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,82,131 ಮಂದಿ ಸೋಂಕಿತರ ಪೈಕಿ ಈವರೆಗೆ 4,44,37,304 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










