ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,586 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,43,57,546ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 48 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,27,416ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,43,57,546 ಮಂದಿ ಸೋಂಕಿತರ ಪೈಕಿ ಈವರೆಗೆ 4,37,33,624 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










