ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 862 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,44,938ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,28,980ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,44,938 ಮಂದಿ ಸೋಂಕಿತರ ಪೈಕಿ ಈವರೆಗೆ 4,40,93,409 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










