ದೇಶದಲ್ಲಿ 92,596 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆ…

92
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 92,596 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,219 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,53,528 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,90,89,069 ಮಂದಿ ಸೋಂಕಿತರ ಪೈಕಿ ಈವರೆಗೆ 2,75,04,126 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.