ದೇಶದಲ್ಲಿ ಒಂದೇ ದಿನ 10,974ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,54,065 ಲಕ್ಷಕ್ಕೆ ಏರಿಕೆ…

126
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 10,974 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,54,065 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಅಂದೇ ದಿನ 2003 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 11903ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,54,065 ಮಂದಿ ಸೋಂಕಿತರ ಪೈಕಿ 1,86,935 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 1,55,227 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.