ದೇಶದಲ್ಲಿ ಒಂದೇ ದಿನ 44,684 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 87,73,479ಕ್ಕೆ ಏರಿಕೆ…

106
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 44,684 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 87,73,479ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 520 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,29,188ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 87,73,479 ಮಂದಿ ಸೋಂಕಿತರ ಪೈಕಿ ಈವರೆಗೆ 81,63,572 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 4,80,719 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.