ದೇಶದಲ್ಲಿ ಒಂದೇ ದಿನ 47,638 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 84,11,724 ಕ್ಕೆ ಏರಿಕೆ…

113
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 47,638 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 84,11,724 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 670 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,24,985ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 84,11,724 ಮಂದಿ ಸೋಂಕಿತರ ಪೈಕಿ 77,65,966 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 5,27,962 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.