ದೇಶದಲ್ಲಿ ಒಂದೇ ದಿನ 55,838 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 77,06,946 ಕ್ಕೆ ಏರಿಕೆ…

176
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 55,838 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 77,06,946 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 717 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,15,914ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 77,06,946 ಮಂದಿ ಸೋಂಕಿತರ ಪೈಕಿ 68,74,518 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 7,15,812 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.