ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 67,151 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 32,34,475 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,059 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 59,449ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 32,34,475 ಮಂದಿ ಸೋಂಕಿತರ ಪೈಕಿ 24,67,759 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 7,07,267 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










