ದೇಶದಲ್ಲಿ ಒಂದೇ ದಿನ 67,708 ಸೋಂಕಿತರು ಪತ್ತೆ- ಸೋಂಕಿತರ ಸಂಖ್ಯೆ 73,07,098ಕ್ಕೆ ಏರಿಕೆ…

212
firstsuddi

ನವದೆಹಲಿ : ಕಳೆದ 24 ಗಂಟೆಯಲ್ಲಿ ದೇಶದಲ್ಲಿ 67,708 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 73,07,098ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 680 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 1,11,266 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 73,07,098ಮಂದಿ ಸೋಂಕಿತರ ಪೈಕಿ 63,83,442 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 8,12,390 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.