ದೇಶದಲ್ಲಿ ಒಂದೇ ದಿನ 69,878 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 29,75,702 ಕ್ಕೆ ಏರಿಕೆ…

118
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 69,878  ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,75,702 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 945 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 55,928ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 29,75,702 ಮಂದಿ ಸೋಂಕಿತರ ಪೈಕಿ 22,22,578 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 6,97,330 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.