ದೇಶದಲ್ಲಿ ಒಂದೇ ದಿನ 86,508 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 5,732,519ಕ್ಕೆ ಏರಿಕೆ…

154
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,508 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,732,519ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,129 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 91,149 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 5,732,519ಮಂದಿ ಸೋಂಕಿತರ ಪೈಕಿ 46,74,988 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,66,382 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.