ದೇಶದಲ್ಲಿ ಒಂದೇ ದಿನ ದಾಖಲೆಯ 57,117 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆ…

151
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 57,117 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 764 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 36,511ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 16,95,988 ಮಂದಿ ಸೋಂಕಿತರ ಪೈಕಿ 10,94,374 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 5,65,103 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.