ದೇಶದಲ್ಲಿ ಒಂದೇ ದಿನ ದಾಖಲೆಯ 92,071 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 48,46,428ಕ್ಕೆ ಏರಿಕೆ…

123
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ದಾಖಲೆಯ ಬರೋಬ್ಬರಿ 92,071 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 48,46,428 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,136 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 79,772ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 48,46,428 ಮಂದಿ ಸೋಂಕಿತರ ಪೈಕಿ 37,80,108 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 9,86,598 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.