ದೇಶದಲ್ಲಿ ಒಂದೇ ದಿನ 96,424 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 52,14,678ಕ್ಕೆ ಏರಿಕೆ…

187
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 96,424 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 52,14,678ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 1,174ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 84,372 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 52,14,678ಮಂದಿ ಸೋಂಕಿತರ ಪೈಕಿ 41,12,552 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಇನ್ನೂ 10,17,754 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.