ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,088 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,18,447ಕ್ಕೆ ಏರಿಕೆ…

162
firstsuddi

ನವದೆಹಲಿ : ದೇಶದಲ್ಲಿ ಲಾಕ್‍ಡೌನ್ ಸಡಿಲಿಕೆ ಆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,088 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,18,447ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 148 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 3,583ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,18,447 ಮಂದಿ ಸೋಂಕಿತರ ಪೈಕಿ 45,299 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನು ಉಳಿದ 63,624 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.