ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 62,538 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 20.27 ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೇ ಕಳೆದ 24 ಗಂಟೆಯಲ್ಲಿ 886 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 41,858ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ನಿನ್ನೆ ಒಂದೇ ದಿನ 5,74,783 ಮಂದಿಯ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ದೇಶದಲ್ಲಿ ಈವರೆಗೂ 2,27,24,134 ಮಂದಿಯ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದ್ದು, 13.60 ಲಕ್ಷ ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










