ದೇಶದಲ್ಲಿ ಕೊರೊನಾ ನಾಗಾಲೋಟ-ಒಂದೇ ದಿನ 49,931 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆ…

201
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 49,931 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 14,35,453ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 708 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 14,35,453 ಮಂದಿ ಸೋಂಕಿತರ ಪೈಕಿ 9,17,568 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 4,85,114 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.