ದೇಶದಲ್ಲಿ ಕೊರೊನಾ ನಾಗಾಲೋಟ-ಒಂದೇ ದಿನ 55,079 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 16,38,871ಕ್ಕೆ ಏರಿಕೆ…

125
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 55,079 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 779 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 35,747ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 16,38,871ಮಂದಿ ಸೋಂಕಿತರ ಪೈಕಿ 10.57,806 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 5,45,318 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹಾಗೂ ದೇಶದಲ್ಲಿ ಒಟ್ಟು ಈವರೆಗೆ 1,88,32,970 ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.