ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 109ಕ್ಕೆ ಏರಿಕೆ-4 ಸಾವಿರ ಗಡಿ ದಾಟಿದ ಸೋಂಕಿತ ಸಂಖ್ಯೆ…

132
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 27 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 100ರ ಗಡಿ ದಾಟಿದೆ. ಹಾಗೂ ಸೋಂಕಿತರ ಸಂಖ್ಯೆ 4067ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ನಿನ್ನೆ ಒಂದೇ ದಿನ 500ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.