ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆ…

144
firstsuddi

ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,604 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 70,756 ಮಂದಿ ಸೋಂಕಿತರ ಪೈಕಿ ಈವರೆಗೆ 22,454 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 2293 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹಾಗೂ ಇನ್ನುಳಿದ 46,008 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.