ಬೆಂಗಳೂರು : ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ.
ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಉಡುಪಿ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜೊತೆಗೆ ಕೆಎಸ್ ಆರ್ ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ.
ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ತಡೆಯಲು ನಗರದಾದ್ಯಂತ ಆಯಾ ಠಾಣಾ ವ್ಯಾಪ್ತಿಯಲ್ಲಿ ಮುಸ್ಲಿಂ ಮುಖಂಡರೊಂದಿಗೆ ಪೊಲೀಸರು ಸಭೆ ನಡೆಸಿದ್ದಾರೆ. ಅನುಮತಿ ಇರದೇ ಯಾವುದೇ ರೀತಿಯ ಪ್ರತಿಭಟನೆಯಲ್ಲಿ ಭಾಗಿಯಾಗಿ ಸಾರ್ವಜನಿಕರಿಗೆ ತೊಂದರೆ ಕೊಡದಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ತಮ್ಮ ತಮ್ಮ ಸಮುದಾಯದ ಜನರಿಗೆ ತಿಳಿಸುವಂತೆ ಸೂಚನೆ ನೀಡಲಾಗಿದೆ.










