ದ್ರೌಪದಿ ಮುರ್ಮು ಕುರಿತು ಅವಹೇಳನ ಟ್ವೀಟ್ ; ರಾಮ್ ಗೋಪಾಲ್ ವರ್ಮಾ ವಿರುದ್ಧ ದೂರು…

61
firstsuddi

ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇದೀಗ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ಅವಹೇಳನದ ಟ್ವೀಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

“ದ್ರೌಪದಿ ರಾಷ್ಟ್ರಪತಿ ಆದರೆ, ಪಾಂಡವರು ಯಾರು? ಮುಖ್ಯವಾಗಿ ಕೌರವರು ಯಾರು?” ಅಂತ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ. ಇದೀಗ ಈ ಟ್ವೀಟ್ ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಬಿಜೆಪಿ ನಾಯಕರಾದ ಗುಡೂರು ನಾರಾಯಣ ರೆಡ್ಡಿ ಮತ್ತು ಟಿ. ನಂದೇಶ್ವರ ಗೌಡ ಅವರು ಹೈದರಾಬಾದ್ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ, ಆಂಧ್ರದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲೂ ದೂರು ದಾಖಲಾಗುತ್ತಿವೆ.

ಇನ್ನು ಟ್ವೀಟ್ ವೈರಲ್ ಆಗಿ, ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾಮ್ ಗೋಪಾಲ್ ವರ್ಮಾ ಮತ್ತೊಂದು ಟ್ವಿಟ್ ಮಾಡಿ, ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮಹಾಭಾರತದಲ್ಲಿ ದ್ರೌಪದಿ ನನ್ನ ನೆಚ್ಚಿನ ಪಾತ್ರ. ಅಲ್ಲದೆ ದ್ರೌಪದಿ ಎಂದು ಹೆಸರು ಇಟ್ಟುಕೊಳ್ಳುವವರ ಸಂಖ್ಯೆ ಬಹಳ ಕಡಿಮೆ. ಈಗ ದ್ರೌಪದಿ ಅಂತ ಹೆಸರು ಕೇಳಿದ ತಕ್ಷಣ ನಾನು ಮಹಾಭಾರತದ ಪಾತ್ರವನ್ನು ನೆನಪಿಸಿಕೊಂಡೆ. ಇದರಲ್ಲಿ ಬೇರೆ ಯಾವ ಉದ್ದೇಶವೂ ಇಲ್ಲ, ಯಾರ ಭಾವನೆಗಳಿಗೂ ಧಕ್ಕೆ ತರಲು ನಾನು ಈ ರೀತಿ ಟ್ವೀಟ್ ಮಾಡಿಲ್ಲ ಎಂದಿದ್ದಾರೆ.