ದ್ವಿತೀಯ ಪಿಯುಸಿ ಫಲಿತಾಂಶ- ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಅಂತಿಮ ಸ್ಥಾನ…

59
firstsuddi

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.

ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ, ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ, 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ದಕ್ಷಿಣ ಕನ್ನಡ ಮೊದಲ ಸ್ಥಾನ (95.33%), ಉಡುಪಿಗೆ ಎರಡನೇ ಸ್ಥಾನ( 95.24%), ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ, ಉತ್ತರ ಕನ್ನಡ 4ನೇ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ 9ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ದಕ್ಷಿಣ ಜಿಲ್ಲೆ 10ನೇ ಸ್ಥಾನದಲ್ಲಿದೆ. ಬೆಂಗಳೂರು ಉತ್ತರ ಜಿಲ್ಲೆ 11ನೇ ಸ್ಥಾನದಲ್ಲಿದೆ. ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.