ಧಾರವಾಡ : ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು…

81
firstsuddi

ಧಾರವಾಡ : ಕೊರೊನಾ ಹಾವಳಿ ಕಡಿಮೆ ಆಯಿತು ಅಂದುಕೊಳ್ಳುತ್ತಿರುವಾಗಲೇ, ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಜಿಲ್ಲೆಯ ಸತ್ತೂರು ಬಡಾಣೆಯಲ್ಲಿರೋ ಎಸ್ ಡಿಎಂ ವೈದ್ಯಕೀಯ ಕಾಲೇಜಿನ ಸುಮಾರು 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಆರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಹಾಸ್ಟೆಲ್ನ 300 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ತಪಾಸಣೆ ವೇಳೆ 66 ವಿದ್ಯಾರ್ಥಿಗಳಿಗೆ ಸೋಂಕು ಇರುವುದು ದೃಢಪಟ್ಟಿದೆ. ಇನ್ನೂ 200 ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲು ನಿರ್ಧಾರ ಮಾಡಲಾಗಿದ್ದು, ಸದ್ಯ ಹಾಸ್ಟೆಲ್ನಲ್ಲಿ ಸೋಂಕಿತ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ತಿಳಿಸಿದ್ದಾರೆ.