ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ಟೆಂಪೋ ಟ್ರಾವೆಲರ್-ಟಿಪ್ಪರ್ ಡಿಕ್ಕಿ 11 ಮಂದಿ ದುರ್ಮರಣ…

132
firstsuddi

ಧಾರವಾಡ : ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ವೇಳೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿದೆ ಪರಿಣಾಮ 10 ಮಹಿಳೆಯರು ಸೇರಿ ಒಟ್ಟು 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಿಂದಾಗಿ ಟೆಂಪೋ ಟ್ರಾವೆಲರ್‌ ಹಾಗೂ ಟಿಪ್ಪರ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಧಾರವಾಡದಿಂದ ಸುಮಾರು 8 ಕಿಮೀ ದೂರದಲ್ಲಿರು ಇಟ್ಟಿಗಟ್ಟಿ ಎಂಬ ಸ್ಥಳದಲ್ಲಿ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲು ಹಲವು ಸಮಯದವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.