ಕಾರವಾರ : ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಕೆಲ ಸಮಯದ ಬಳಿಕ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ಇಂದು ನಡೆದಿದೆ.
ನಗರದ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತಪಟ್ಟಿದ್ದಾರೆ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಧ್ವಜಾರೋಹಣದ ಬಳಿಕ ಎಎಸ್ಐ ಮಹ್ಮದ್ ಶೇಖ್ ಅವರಿಗೆ ಎದೆನೋವು ಕಾಣಿಸಿಕೊಂಡು ಠಾಣೆಯಲ್ಲಿಯೇ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.










