ನ.14ರಿಂದ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ…

53
firstsuddi

ನವದೆಹಲಿ : ಹುಬ್ಬಳ್ಳಿಯಿಂದ ದೆಹಲಿಗೆ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಇಂಡಿಗೋ ಏರ್ ಲೈನ್ಸ್ ಇದೇ ನವೆಂಬರ್ 14, 2022ರಿಂದ ನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದೆ.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ಹಾಗೂ ಹುಬ್ಬಳ್ಳಿ-ಧಾರವಾಡದ ಪ್ರಯಾಣಿಕರ ಮನವಿಯನ್ನು ಪುರಸ್ಕರಿಸಿ ಇಂಡಿಗೋ ಆಡಳಿತ ಮಂಡಳಿ ಸೇವೆ ಆರಂಭಿಸಿದೆ. ಈ ಬಗ್ಗೆ ಪ್ರಹ್ಲಾದ್ ಜೋಶಿ ಕೂಡಾ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ವಿಮಾನವು ಬೆಳಗ್ಗೆ 10ಕ್ಕೆ ದೆಹಲಿಯಿಂದ ಹೊರಟು ಮಧ್ಯಾಹ್ನ 12.45ಕ್ಕೆ ಹುಬ್ಬಳ್ಳಿ ತಲುಪಲಿದೆ. ಮರಳಿ ಮಧ್ಯಾಹ್ನ 13.15ಕ್ಕೆ ಹುಬ್ಬಳ್ಳಿಯಿಂದ ಹೊರಟು 15.45ಕ್ಕೆ ದೆಹಲಿ ತಲುಪಲಿದೆ. ಟಿಕೆಟ್ ಬುಕ್ಕಿಂಗ್ ಕೂಡ ಈಗಾಗಲೇ ಪ್ರಾರಂಭವಾಗಿದೆ.