ಬೆಂಗಳೂರು : ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
• ಕೋವಿಡ್-19 ಸೋಂಕು ತಡೆಗಟ್ಟುವ ಸಲುವಾಗಿ, ಪ್ರಸಕ್ತ ವರ್ಷದ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹಾಗೂ ಗೌರವ ಪೂರ್ವಕವಾಗಿ ಆಚರಿಸುವುದು.
• ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು.
• ರಾಜ್ಯೋತ್ಸವ ಆಚರಣೆಯನ್ನು ಗೌರವಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.
• ಕನ್ನಡ ರಾಜ್ಯೋತ್ಸವ ಸಮಾರಂಭದ ಆಚರಣೆಯ ವೇಳೆ ರಾಜ್ಯಾದ್ಯಂತ ಧ್ವಜಾರೋಹಣ ಸ್ಥಳದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಪ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸುವುದು.
• ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು, ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
• ರಾಜ್ಯ ಸರ್ಕಾರದ ಆದೇಶ/ ಮಾರ್ಗಸೂಚಿಗಳನ್ನು ಹಾಗೂ ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಜರುಗಿಸಲಾಗುವುದು ಆದೇಶದಲ್ಲಿ ತಿಳಿಸಲಾಗಿದೆ.
ಅದೇ ರೀತಿ ದೀಪಾವಳಿ ಹಬ್ಬದ ಆಚರಣೆ ಸಂಬಂಧ ಸರ್ಕಾರ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.










