ನ.8ರಿಂದ ಎಲ್‌ಕೆಜಿ , ಯುಕೆಜಿ ಆರಂಭ…

64
firstsuddi

ಬೆಂಗಳೂರು : ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದ್ದು, ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ.

ಮಾರ್ಗಸೂಚಿಗಳೇನು?
ಎಲ್‌ಕೆಜಿ,ಯುಕೆಜಿ ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ಮಕ್ಕಳ ಹಾಜರಾತಿಗೆ ಪೋಷಕರ ಅನುಮತಿ ಪತ್ರ ಪಡೆಯಬೇಕು. ಸಿಬ್ಬಂದಿ ಹಾಗೂ ಮಕ್ಕಳ ಪೋಷಕರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಎಲ್‌ಕೆಜಿ ,ಯುಕೆಜಿ ಭೌತಿಕ ತರಗತಿಗಳು ಅರಂಭ. ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಮಕ್ಕಳನ್ನು ಕನಿಷ್ಠ 1 ಮೀಟರ್ ಅಂತರದಲ್ಲಿ ಕೂರಿಸಬೇಕು. ಮಕ್ಕಳು, ಸಿಬ್ಬಂದಿ ಪ್ರತಿ 30 ನಿಮಿಷಕ್ಕೊಮ್ಮೆ ಕೈತೊಳೆಯಬೇಕು. ಬೆಳಗ್ಗೆ 9.39 ರಿಂದ ಮಧ್ಯಾಹ್ನ 3.39 ರವರೆಗೆ ತರಗತಿ ನಡೆಸಬೇಕು ಎಂದು ಹೇಳಲಾಗಿದೆ. ಕೊವಿಡ್ ಲಕ್ಷಣ ಇರುವ ಮಕ್ಕಳಿಗೆ ಎಲ್‌ಕೆಜಿ ,ಯುಕೆಜಿ ಪ್ರವೇಶ ಇಲ್ಲ ಎಂದು ತಿಳಿಸಲಾಗಿದೆ.