ನಂದಿನಿ ಹಾಲಿನ ದರ ಏರಿಕೆಗೆ ಸಿಎಂ ತಡೆ…

85
firstsuddi

ಬೆಂಗಳೂರು/ಕಲಬುರಗಿ : ಇಂದಿನಿಂದ ನಂದಿನಿ ಹಾಲಿನ ದರವನ್ನು 3 ರೂ.ಗಳಷ್ಟು ಹೆಚ್ಚಳ ಮಾಡಲು ಕೆಎಂಎಫ್ ಮುಂದಾಗಿತ್ತು. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ವಿಚಾರವಾಗಿ ನವೆಂಬರ್ 20ರ ನಂತರ ಸಭೆ ನಡೆಸಿ ತೀರ್ಮಾನ ಮಾಡ್ತೀವಿ ಎಂದು ಸಿಎಂ ಹೇಳಿದ್ದಾರೆ. 

ನಿನ್ನೆ ಸೇಂಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ತಿಂಗಳಿನಿಂದ ಈ ವಿಚಾರ ಚರ್ಚೆಯಾಗುತ್ತಿದೆ. ಹಾಲಿನ ದರ ಏರಿಕೆ ಕುರಿತು ಕೆಎಂಎಫ್ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪ್ರತಿ ಲೀಟರ್ ಗೆ 3 ರೂಗೆ ಏರಿಕೆ ಮಾಡಬೇಕೆಂದು 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಮನವಿ ಮಾಡಿದ್ದವು. ಅಲ್ಲದೆ ದರ ಏರಿಕೆಯ ಹಣವನ್ನು ರೈತರಿಗೆ ನೀಡುವುದಾಗಿ ಹೇಳಿದ್ದವು. ಈ ಕುರಿತು ಹಿಂದೊಮ್ಮೆ ಬೆಂಗಳೂರಿನಲ್ಲಿ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೆಎಂಎಫ್ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆದಿತ್ತು.

ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿತ್ತು. ಕೆಎಂಎಫ್ ನ ಎಲ್ಲ 16 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದವು.