ನಕಲಿ ತುಪ್ಪ ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸರ ದಾಳಿ…

81
firstsuddi

ಬೆಂಗಳೂರು : ಮೈಸೂರಿನ ಬಳಿಕ ಇದೀಗ ನಗರದಲ್ಲೂ ನಕಲಿ ತುಪ್ಪ ತಯಾರಿಸುತ್ತಿದ್ದ ಘಟಕವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನೆಲಮಂಗಲ ಉಪವಿಭಾಗದ ಮಾದನಾಯಕನಹಳ್ಳಿ ವ್ಯಾಪ್ತಿಯ ಬೈಯಂಡಳ್ಳಿಯಲ್ಲಿ ನಕಲಿ ತುಪ್ಪ ತಯಾರಿಸುತ್ತಿದ್ದ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಬಾಬುಲಾಲ್ ಎಂಬಾತನನ್ನು ಬಂಧಿಸಿದ್ದಾರೆ. ಪೊಲೀಸರು ದಾಳಿ ನಡೆಸಿ 15 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತು ಹಾಗೂ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ.