ನಗರಸಭೆ ಚುನಾವಣೆ : ಬಿರುಸಿನ ಪ್ರಚಾರ ನಡೆಸಿದ ಬಿಎಸ್‍ಪಿ ಅಭ್ಯರ್ಥಿ ಕೆ.ಬಿ.ಸುಧಾ.

136
firstsuddi

ಚಿಕ್ಕಮಗಳೂರು: ನಗರಸಭೆ ಚುನಾವಣೆಯ 13ನೇ ವಾರ್ಡಿನ ಬಿಎಸ್‍ಪಿ ಅಭ್ಯರ್ಥಿ ಕೆ.ಬಿ.ಸುಧಾ ಅವರು ನಗರದ ಶಂಕರಪುರ ಬಡಾವಣೆಯಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದರು.

ಪಕ್ಷದ ಮುಖಂಡರು ಕಾರ್ಯಕರ್ತರು ಮತ್ತು ಬೆಂಬಲಿಗ ರೊಂದಿಗೆ ಬಡಾವಣೆಯಲ್ಲಿ ಮೆರವಣಿಗೆ ನಡೆಸಿದ ಅವರು, ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಚ್ಛ, ದಕ್ಷ, ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತಕ್ಕಾಗಿ ವಾರ್ಡಿನ ಅಭಿವೃದ್ಧಿಗಾಗಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ತಾವು ಚುನಾವಣೆಯಲ್ಲಿ ವಿಜೇತರಾದಲ್ಲಿ ವಾರ್ಡಿನ ಸರ್ವಾಂಗೀಣ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಲಭ್ಯ ಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಆತ್ಮಸಾಕ್ಷಿಯಿಂದ ಮತ ಚಲಾಯಿಸುವಂತೆ ಮನವಿ ಮಾಡಿದರು.

ಬಿಎಸ್‍ಪಿ ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ ಮಾತನಾಡಿ, ಕಳೆದ 15 ವರ್ಷಗಳ ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಗರದ ನಾಗರೀಕರು ಬೇಸತ್ತಿದ್ದು, ಈ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ವಿತವಾಗಿದೆ ಎಂದರು.

ಜಿಲ್ಲಾ ಸಹೋದರತ್ವ ಸಮಿತಿಯ ಉಪಾಧ್ಯಕ್ಷೆ ಕೆ.ಎಸ್.ಮಂಜುಳ, ಪಕ್ಷದ ಮುಖಂಡರಾದ ಸಿ.ಎಲ್.ಅಶ್ವಿನಿ, ಅನುಸೂಯ, ಶೋಭ, ರೇಖಾ, ಶಶಿಕಲಾ, ಪುಷ್ಪ ರವಿ, ಕಮಲ ಹಾಜರಿದ್ದರು.