ನಟಿ ಕಂಗನಾ ರಣಾವತ್ ಹೇಳಿಕೆಗೆ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿ…

124
firstsuddi

ನವದೆಹಲಿ : ಬಾಲಿವುಡ್ ನಟಿ ಕಂಗನಾ ರಣಾವತ್ ನೀಡಿರುವ ಹೇಳಿಕೆಗೆ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿ ಕಾರಿದ್ದಾರೆ.

ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಂಗನಾ ಅವರು, ಭಾರತಕ್ಕೆ 1947 ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಎಂದು ಹೇಳಿದ್ದರು. ಈ ಹೇಳಿಕೆಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿರುವ ವರುಣ್ ಗಾಂಧಿ, ಒಂದು ಬಾರಿ ಮಹಾತ್ಮ ಗಾಂಧಿಯವರ ತ್ಯಾಗವನ್ನು ಅವಮಾನಿಸುತ್ತೀರಿ, ಕೆಲವೊಮ್ಮೆ ಅವರ ಹಂತಕನನ್ನು ಗೌರವಿಸುತ್ತೀರಿ ಮತ್ತು ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆ ತಿರಸ್ಕಾರ ವ್ಯಕ್ತಪಡಿಸುತ್ತಿದ್ದೀರಿ. ಇದನ್ನು ಹುಚ್ಚುತನ ಎನ್ನಬೇಕಾ ಅಥವಾ ದೇಶದ್ರೋಹ ಎಂದು ಕರೆಯಬೇಕೇ? ಎಂದು ಪ್ರಶ್ನಿಸಿದ್ದಾರೆ.