ನಡುರಸ್ತೆಯಲ್ಲೇ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ…

287
firstsuddi

ಮಂಡ್ಯ : ಹಾಡಹಗಲೇ ನಡುರಸ್ತೆಯಲ್ಲಿ ಯುವಕನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ ದೊಡ್ಡಿಯಲ್ಲಿ ನಡೆದಿದೆ. ನವೀನ್(32) ಮೃತ ಯುವಕ ಎನ್ನಲಾಗಿದ್ದು, ಮೂವರು ಯುವಕರು ನವೀನ್ ಅವರನ್ನು ಕೈಯಲ್ಲಿ ಲಾಂಗ್ ಹಿಡಿದು ಅಟ್ಟಾಡಿಸಿಕೊಂಡು ಬಂದು ಮನಸ್ಸೋ ಹಿಚ್ಚೆ ಹಲ್ಲೆ ಮಾಡಿದ್ದು, ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ನವೀನ್ ಅವರಿಗೆ ಕೆ.ಎಂ ದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮೆಡಿಕಲ್ ಕಾಲೇಜಿಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೀನ್ ಅವರು ಮೃತಪಟ್ಟಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕೆ.ಎಂ ದೊಡ್ಡಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.