ನದಿ ನೀರು ಬಳಕೆಗೆ ಗ್ರೀನ್ ಸೆಸ್ ವಿಧಿಸಲು ಮುಂದಾದ ರಾಜ್ಯ ಸರ್ಕಾರ.

26

ಬೆಂಗಳೂರು: ದಿನಬಳಕೆ ವಸ್ತುಗಳ ಬೆಲೆ ಏರಿಕೆಗಳಿಂದ ಈಗಾಗಲೇ ಕಂಗಾಲಾಗಿರುವ ರಾಜ್ಯದ ಜನರಿಗೆ ಮತ್ತೊಂದು ಸೆಸ್ ಸಂಕಷ್ಟ ಶುರುವಾಗುವುದು ಬಹುತೇಕ ಖಚಿತವಾಗಿದೆ. ಕುಡಿಯುವ ನೀರಿಗೂ ಸೆಸ್ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ನಗರವಾಸಿಗಳ ಜೇಬಿಗೆ ಕತ್ತರಿ ಹಾಕೋ ಮುನ್ಸೂಚನೆ ನೀಡಿದೆ. ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ 7 ದಿನಗಳೊಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಜೀವವೈವಿಧ್ಯ ತಾಣವಾದ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದೆ. ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ನೀರು ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹಾಗಾಗಿ, ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಲು ಹಸಿರುವ ಸೆಸ್ ವಿಧಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.