ಮಡಿಕೇರಿ : ಬಟ್ಟೆ ತೊಳೆಯಲು ಹೋಗಿ ನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾರೆಹಡ್ಲು ಗ್ರಾಮದಲ್ಲಿ ನಡೆದಿದೆ. ಕಾವ್ಯ(19) ಹಾಗೂ ಭವ್ಯ(18) ನೀರುಪಾಲಾದ ಯುವತಿಯರು ಎನ್ನಲಾಗಿದ್ದು, ಇವರ ಜೊತೆಯಲ್ಲಿದ್ದ ನವ್ಯಾ ಎಂಬ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮೂವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ಕಾಲು ಜಾರಿ ಬಿದ್ದಿದ್ದು, ಕಾವ್ಯ ಅವರ ಮೃತದೇಹ ಪತ್ತೆಯಾಗಿದ್ದು, ಭವ್ಯ ಅವರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










