ನನ್ನ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ವ್ಯವಹಾರವಿಲ್ಲ. : ಲಕ್ಷ್ಮಿ ಹೆಬ್ಬಾಳ್ಕರ್.

670
firstsuddi

ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವರು, ಜಾರಿ ನಿರ್ಧೇಶನಾಲಯ ಅಧಿಕಾರಿಗಳು ಸೆ. 14 ರಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಸಮ್ಮನ್ಸ್ ನೀಡಿದ್ದರು. ಆದರೆ ನನಗೆ ಸೆ.14ಕ್ಕೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದೆ, ಹೀಗಾಗಿ ನಾನು ನಾಳೆ ವಿಚಾರಣೆಗೆ ಹಾಜರಾಗುತ್ತೇನೆ. 184 ಜನರಿಗೆ ವಿಚಾರಣೆಗೆ ಕರೆದಿದ್ದಾರೆ. ಅದರಲ್ಲಿ ನನ್ನನ್ನೂ ಕರೆದಿದ್ದಾರೆ. ಆದರೆ ಯಾವ ವಿಚಾರವಾಗಿ ವಿಚಾರಣೆಗೆ ಕರೆದಿದ್ದಾರೆ ಎಂಬ ಮಾಹಿತಿ ಇಲ್ಲ. ನಾನು ಬೆಂಗಳೂರು ಅಥವಾ ಬೆಳಗಾವಿಯಲ್ಲಿ ವಿಚಾರಣೆ ನಡೆಸುವಂತೆ ಇಡಿ ಅಧಿಕಾರಿಗಳಲ್ಲಿ ಮನವಿ ಮಾಡಿದ್ದೇನೆ. ಆದರೆ ಇಡಿ ಅಧಿಕಾರಿಗಳಿಂದ ಯಾವುದೇ ಉತ್ತರ ಬಂದಿಲ್ಲ. ಅಲ್ಲದೇ ನನ್ನ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ಯಾವುದೇ ವ್ಯವಹಾರವಿಲ್ಲ. ಆದರೂ ಯಾಕೆ ವಿಚಾರಣೆಗೆ ಕರೆದಿದ್ದಾರೆ ಎಂಬುವುದು ವಿಚಾರಣೆಗೆ ಹಾಜರಾದ ಬಳಿಕ ತಿಯಬೇಕು ಅಷ್ಟೇ ಎಂದರು.