ಚಿಕ್ಕಮಗಳೂರು : ದತ್ತಜಯಂತಿ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ಆರಂಭಿಸಿದ್ದಾರೆ. ಇದೇ ವೇಳೆ ಬಿಜೆಪಿ ನಾಯಕರ ಹೆಸರಿಗೆ ಮುಸ್ಲಿಂ ಹೆಸರು ಹಾಕಿ ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರಕ್ಕೆ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ದರೆ ಕಾಂಗ್ರೆಸ್ ನವರು ಖಂಡಿತಾ ಕರೆಯಲಿ. ನನ್ನ ಸ್ವಭಾವ ಕುಂಕುಮ ಕಂಡರೆ ಆಗದಿದ್ರೆ, ಕೇಸರಿ ನೋಡಿದ್ರೆ ಆಗದಿದ್ರೆ, ಮುಲ್ಲಾಗಳ ಮೇಲೆ ಪ್ರೀತಿ ಜಾಸ್ತಿ ಇದ್ರೆ ಖಂಡಿತಾ ಕರೆಯಬಹುದು. ನನ್ನ ಮುಲ್ಲಾ ಅಂತ ಕರೆಯೋಕ್ಕಾಗಲ್ಲ, ಹಿಂದೂ ಹುಲಿ ಅಂತಾನೇ ಕರೆಯಬೇಕು ಎಂದರು.
ನನ್ನ ಮುಲ್ಲಾ ಅಂತ ಕರೆದ್ರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ. ಸ್ವಭಾವಕ್ಕೆ ತಕ್ಕಂತೆ ಬಿರುದುಗಳು ನಮಗೆ ಬರುತ್ತದೆ. ಪರ್ಷಿಯನ್ ಭಾಷೆಯನ್ನ ಆಡಳಿತ ಭಾಷೆಯನ್ನಾಗಿ ಮಾಡಿದವನನ್ನ ಕನ್ನಡ ಪ್ರೇಮಿ ಅಂತ ಹೇಳಕ್ಕಾಗುತ್ತಾ.? ಹಾಗೆ ಹೇಳಿದ್ರೆ ಅದಕ್ಕಿಂತ ಅಪಪ್ರಚಾರ ಬೇರೆ ಏನಿದೆ. ಮುಲ್ಲಾ ಅನ್ನೋ ಹೆಸರು ಯಾರಿಗೆ ಕನೆಕ್ಟ್ ಆಗುತ್ತೆ ಅಂದ್ರೆ, ಶಾದಿ ಭಾಗ್ಯ, ದೇ ಆರ್ ಆಲ್ ಮೈ ಬ್ರದರ್ಸ್ ಅನ್ನೋರಿಗೆ ಕನೆಕ್ಟ್ ಆಗುತ್ತೆ. ಬೆಂಕಿ ಹಾಕಿದ್ರು ಕೂಡ ಅಮಾಯಕರು ಅನ್ನೋರಿಗೆ ಕನೆಕ್ಟ್ ಆಗುತ್ತೆ. ಕೇಸರಿ, ಕುಂಕುಮವನ್ನ ದೂಡಿ ಟೋಪಿಯನ್ನ ಪ್ರೀತಿಯಿಂದ ಹಾಕಿಕೊಳ್ಳುವವರಿಗೆ ಕನೆಕ್ಟ್ ಆಗುತ್ತೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.










