ಬೆಂಗಳೂರು : ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಿನ್ನೆ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಘೋಷಿಸಿದ್ದರು. ಅದರಿಂದ ಸುರೇಶ್ ಕುಮಾರ್ ಅವರು ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು ಟ್ವೀಟ್ ಮಾಡುವ ಮೂಲಕ ಎಲ್ಲಾ ಗೊಂದಲಕ್ಕೂ ತೆರೆ ಎಳೆದಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕುರಿತು ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಯಡಿಯೂರಪ್ಪನವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಶಿಕ್ಷಣ ಸಚಿವ @nimmasuresh ರವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ.
— CM of Karnataka (@CMofKarnataka) June 29, 2021
ನಿನ್ನೆ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟವಾದ ನಂತರ ಸಚಿವ ಸುಧಾಕರ್ ಅವರು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಪರೀಕ್ಷಾ ದಿನಾಂಕ ಕುರಿತು ಸುರೇಶ್ ಕುಮಾರ್ ತಮಗೆ ಯಾವುದೇ ಮಾಹಿತಿ ನೀಡಿರಲಿಲ್ಲ, ತಜ್ಞರ ಸಮಿತಿ ವರದಿಯಲ್ಲಿ ಪರೀಕ್ಷೆ ಬಗ್ಗೆ ಹೇಳಿಯೇ ಇಲ್ಲ. ಅಲ್ಲದೆ ಆರೋಗ್ಯ ಇಲಾಖೆ ಅನುಮತಿ ಪಡೆದಿಲ್ಲ, ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಗೊತ್ತಾಗಿದೆ ಎಂದಿದ್ದರು.










