ನಮ್ಮ ದೇಶದ ಸುರಕ್ಷತೆಗಾಗಿ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು : ಅಮಿತ್ ಶಾ…

193
firstsuddi

ಶಿವಮೊಗ್ಗ : ಲೋಕಸಭಾ ಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬೃಹತ್ ಮೆರವಣಿಗೆ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ್ದು, ನಮ್ಮ ದೇಶದ ಸುರಕ್ಷತೆಗಾಗಿ ಹಾಗೂ ಪಾಕಿಸ್ತಾನದ ಭಯೋತ್ಪಾದಕರನ್ನು ಮಟ್ಟಹಾಕಲು ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಹೇಳಿದ್ದು, ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ, ಮಾಜಿ ವಿಧಾನ ಪರಿಷತ್ ಸಭಾಪತಿ ಡಿ.ಎಸ್ ಶಂಕರ್ ಮೂರ್ತಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಿಲ್ಲಾಧ್ಯಕ್ಷರಾದ ಎಸ್ ರುದ್ರೇಗೌಡ ಸೇರಿದಂತೆ ಪ್ರಮುಖರು ಶಾ ಅವರಿಗೆ ಸಾಥ್ ನೀಡಿದರು.