ನಲಪಾಡ್ ಹಲ್ಲೆ ನಡೆಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು : ಸಿದ್ದು ಹಳ್ಳೇಗೌಡ.

49
firstsuddi

ಬೆಂಗಳೂರು : ನನ್ನ ಮೇಲೆ ನಲಪಾಡ್ ಸೇರಿದಂತೆ ಯಾರು ಹಲ್ಲೆ ನಡೆಸಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು. ನಾನು ಆರಾಮಾಗಿದ್ದೇನೆ ಎಂದು ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಅವರು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಸಿದ್ದು, ನಮ್ಮ ನಡುವೆ ಯಾವುದೇ ಜಗಳವಾಗಿಲ್ಲ. ಹೊಡೆದಾಟದ ಪೋಟೋ ವೈರಲ್ ಅಗಿರುವುದು ಸುಳ್ಳು. ನಾನು ಆರೋಗ್ಯವಾಗಿದ್ದೇನೆ. ಇದು ಬಿಜೆಪಿ ಷಡ್ಯಂತ್ರವಾಗಿದೆ. ಈ ಸಂಬಂಧ ಸುಳ್ಳು ಸುದ್ದಿ ಹರಡುವುನ್ನು ನಿಲ್ಲಿಸಿ ಎಂದಿದ್ದಾರೆ.

ಸಿದ್ದು ಹಳ್ಳೇಗೌಡ ಮೇಲೆ ನಲಪಾಡ್ ಹಲ್ಲೆ ಆರೋಪ ಕೇವಲ ಕಪೋಲ ಕಲ್ಪಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಲಪಾಡ್ ಯಾರ ಮೇಲೂ ಹಲ್ಲೆ ಮಾಡಿಲ್ಲ. ಹಲ್ಲೆ ಸಂಬಂಧ ಯಾರಾದ್ರೂ ದೂರು ಕೊಟ್ಟಿದ್ದಾರಾ? ನಾನು ಅಲ್ಲಿಗೆ ಹೋಗೇ ಇಲ್ಲ ಅಂತಾ ಸಿದ್ದು ಹೇಳಿದ್ದಾನೆ. ಇದೆಲ್ಲಾ ಕಪೋಲ ಕಲ್ಪಿತ ಸುದ್ದಿ ಎಂದರು.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ನಲಪಾಡ್ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು ನಿನ್ನೆ ಖಾಸಗಿ ಹೋಟೆಲ್ ನಲ್ಲಿ ಸೇರಿದ್ದು ಯಾರೂ ಸಹ ಪೊಲೀಸರಿಗೆ ಈವರೆಗೆ ದೂರು ಕೊಟ್ಟಿಲ್ಲ. ದೂರು ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.