ನವದೆಹಲಿ: ರಾಜಪಥ್‍ನಲ್ಲಿ ನಡೆದ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದ ರಾಷ್ಟ್ರಪತಿ ಕೋವಿಂದ್.

148
Firstsuddi

ನವದೆಹಲಿ: ಇಂದು 72ನೇ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆದಿದ್ದು, ಮಂಜು ಕವಿದ ವಾತಾವರಣವಿದ್ದರಿಂದ ಬೆಳಗ್ಗೆ 10 ಗಂಟೆಗೆ ದ್ವಜಾರೋಹಣನ್ನು ನೆರವೇರಿಸಲಾಯಿತು.ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು ಸೇರಿದಂತೆ ಸಿಡಿಎಸ್ ರಾವತ್ ಪಾಲ್ಗೊಂಡಿದ್ದರು.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜಪಥ್‍‌ನಲ್ಲಿ ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಪುರಸ್ಕೃತರಿಂದ ಪರೇಡ್ ನಡೆಯಿತು.ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮವು ಸರಳವಾಗಿ ನಡೆದಿದ್ದು, ವಿಶೇಷ ಅತಿಥಿಗಳಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.