ನಾಗಬನ ಧ್ವಂಸ ಮಾಡಿದ ಪ್ರಕರಣ – ಎಂಟು ಮಂದಿಯ ಬಂಧನ…

61
firstsuddi

ಮಂಗಳೂರು : ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೋಡಿ ಗ್ರಾಮದ ಬಂಗ್ರ ಕೂಳೂರು ಎಂಬಲ್ಲಿರುವ ಕೋಟ್ಯಾನ್ ಕುಂಟುಂಬದ ನಾಗಬನ ಮತ್ತು ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಎಂಬಲ್ಲಿರುವ ನಾಗಬನ ದ್ವಂಸ ಮಾಡಿ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಾವೂರು ಶಾಂತಿ ನಗರ ನಿವಾಸಿಗಳಾದ ಸಫ್ವಾನ್(25), ಮೊಹಮ್ಮದ್ ಸುಹೈಬ್(23), ನಿಖಿಲೇಶ್(22), ಪಂಜಿಮೊಗರು ನಿವಾಸಿ ಪ್ರವೀಣ್ ಅನಿಲ್ ಮೊಂತೆರೊ(27), ಬಂಟ್ವಾಳ ತಾಲೂಕಿನ ಪಡೂರು ಗ್ರಾಮದ ಪ್ರತೀಕ್(24), ಸುರತ್ಕಲ್ ನಿವಾಸಿ ಜಯಂತ್ ಕುಮಾರ್(30), ಕೂಳೂರು ಪಡುಕೋಡಿ ಗ್ರಾಮದ ಮಂಜುನಾಥ(30) ಹಾಗೂ ಹಾಸನ ಜಿಲ್ಲೆ ಬೇಳೂರು ಗ್ರಾಮ ಮೂಲದ ನೌಷಾದ್ ಅರೇಹಳ್ಳಿ( 30) ಎಂದು ಗುರುತಿಸಲಾಗಿದೆ.

ಆರೋಪಿಗಳು ಕೋಮುಗಲಭೆ ಉಂಟುಮಾಡುವ ಉದ್ದೇಶದಿಂದ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹುನ್ನಾರದಿಂದ ನಾಗರಕಲ್ಲನ್ನು ಧ್ವಂಸ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.