ಬೆಂಗಳೂರು : ಮಹಾತ್ಮ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ ಎಂಬ ನಟ ಕಮಲ್ ಹಾಸನ್ ಅವರ ಹೇಳಿಕೆ ಹಿನ್ನೆಲೆ, ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಅವರು ನಾಥೂರಾಮ್ ಗೋಡ್ಸೆಗಿಂತ ರಾಜೀವ್ ಗಾಂಧಿ ಮಹಾಕ್ರೂರಿ ಎಂದು ಟ್ವೀಟ್ ಮಾಡಿದ್ದು, ನಾಥೂರಾಮ್ ಗೋಡ್ಸೆ ಕೊಂದವರ ಸಂಖ್ಯೆ 1, ಉಗ್ರ ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72 ಹಾಗೂ ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗಾ ನೀವೆ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? ಎಂದು ಟ್ವೀಟ್ ಮಾಡಿದ್ದಾರೆ.










