ನಾನು ಏನೂ ಕೆಲಸ ಮಾಡ್ತಾ ಇಲ್ಲ. ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಮಳವಳ್ಳಿ ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ : ಶಾಸಕ ಅನ್ನದಾನಿ ವ್ಯಂಗ್ಯ…

426
firstsuddi

ಮಂಡ್ಯ : ನಾನು ಮಳವಳ್ಳಿ ಕ್ಷೇತ್ರದಲ್ಲಿ ಏನೂ ಕೆಲಸ ಮಾಡ್ತಾ ಇಲ್ಲಾ, ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ ಮಳವಳ್ಳಿಯಲ್ಲಿ ನನಗೆ ಇದೇ ಕೆಲಸ. ಇಲ್ಲಿನ ಜನರ ಕಷ್ಟ ಸುಖವನ್ನು ನೋಡ್ತಾ ಇರೋದು ಸುಮಲತಾ ಅವರು ಮಾತ್ರ ಎಂದು ಜೆಡಿಎಸ್ ಶಾಸಕ ಅನ್ನದಾನಿ ಅವರು ಸಂಸದೆ ಸುಮಲತಾ ಅಂಬರೀಶ್ ಅವರಿಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕು ಕಚೇರಿ, ಪೊಲೀಸ್ ಠಾಣೆ ಎಲ್ಲವನ್ನೂ ಸಂಸದೆ ಸುಮಲತಾ ಅವರೇ ಮಾಡುತ್ತಿದ್ದಾರೆ. ಕೆರೆಗೆ ಪೂಜೆ, ಕೆರೆ ತುಂಬಿಸಿದ್ದು, ಅಲ್ಲದೇ ಪಿಂಚಣಿ ಕೂಡಾ ಮೇಡಂ ಅವರೇ ಕೊಡಿಸುತ್ತಿರುವುದು. ನಾನು ಏನೂ ಕೆಲಸ ಮಾಡ್ತಾ ಇಲ್ಲ. ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ಮಳವಳ್ಳಿ ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಮಳವಳ್ಳಿಯಲ್ಲಿ ನನಗೆ ಇದೇ ಕೆಲಸ. ಆದರೆ ಸುಮಲತಾ ಅವರೇ ಪ್ರತಿದಿನ ಇಲ್ಲಿನ ಜನರ ಕಷ್ಟ ಸುಖವನ್ನು ನೋಡ್ತಾ ಇರುವುದು. ಈ ಜಿಲ್ಲೆಯಲ್ಲಿ ನಾರಾಯಣ ಗೌಡ ಅವರನ್ನು ಬಿಟ್ಟರೆ ನಾವು 6ಜನ ಇದ್ದೇವೆ. ನಾವು ಏನೂ ಕೆಲಸ ಮಾಡುತ್ತಿಲ್ಲ. ಊಟ ಮಾಡಿಕೊಂಡು ತಿರುಗಾಡುತ್ತಾ ಇದ್ದೇವೆ. ದಯವಿಟ್ಟು ಸುಮಲತಾ ಅವರು ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಬೇಕು. ನಮ್ಮ ಹೊರೆಯನ್ನು ಇಳಿಸಬೇಕು. ಶಾಸಕರೇನು ಕೆಲಸ ಮಾಡುತ್ತಿಲ್ಲ, ಅವರ ಕೆಲಸ ನಾನೇ ಮಾಡುತ್ತಿದ್ದೇನೆ ಎಂದು ಅವರೇ ಹೇಳಿದ್ದಾರಲ್ಲ. ಎಲ್ಲಾ ಅವರೇ ಮಾಡುವಾಗ ನಮಗೇನು ಇಲ್ಲ. ನಮ್ಮ ಜವಾಬ್ದಾರಿಯನ್ನು ಮೇಡಂ ಅವರೇ ತೆಗೆದುಕೊಂಡಿದ್ದಾರಂತೆ. ನಮ್ಮ ಜವಾಬ್ದಾರಿ ಏನು ಇಲ್ಲ ಎಂದು ಜನರಿಗೆ ಹೇಳಿ ತಿರುಗಾಡಿಕೊಂಡು ಇರುತ್ತೇವೆ ಎಂದು ಕಿಡಿಕಾರಿದರು. ಅ.9ರಂದು ಮಂಡ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಅವರು, ಜೆಡಿಎಸ್ ಪಕ್ಷದ ಎಂಟು ಜನ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಒಬ್ಬ ಸಂಸದರು ಗೆದ್ದ ತಕ್ಷಣ, ಆ ಎಂಟು ಜನ ಶಾಸಕರು ಕೆಲಸ ಮಾಡಬಾರದು ಎಂದು ನಿಯಮ ಇದೆಯೇ ಎಂದು ಪ್ರಶ್ನಿಸಿದ್ದರು.