ನಾನು ಕೀವ್​ನಲ್ಲೇ ಇದ್ದೇನೆ, ಪಲಾಯನ ಮಾಡಿಲ್ಲ : ವೊಲೊಡಿಮಿರ್ ಝೆಲೆನ್ಸ್ಕಿ.

71
firstsuddi

ಕೀವ್ : ಉಕ್ರೇನ್ ಅಧ್ಯಕ್ಷ ಪೋಲೆಂಡ್ ಗೆ ಪಲಾಯನ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಝೆಲೆನ್ಸ್ಕಿ ‘ನಾನು ಕೀವ್​ನಲ್ಲೇ ಇದ್ದೇನೆ, ಎಲ್ಲಿಯೂ ಪಲಾಯನ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಇನ್ ಸ್ಟಾಗ್ರಾಮ್ ನಲ್ಲಿ ಝೆಲೆನ್ಸ್ಕಿ ವೀಡಿಯೋವೊಂದನ್ನು ಶೇರ್ ಮಾಡಿದ್ದು, ನಾನು ಕೀವ್ ನಲ್ಲಿದ್ದೇನೆ. ನಾನು ಇಲ್ಲಿ ಕೆಲಸ ಮಾಡುತ್ತಿದ್ದೇನೆ, ಹೊರತಾಗಿ ಪಲಾಯನ ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ವೀಡಿಯೋದಲ್ಲಿ ಝೆಲೆನ್ಸ್ಕಿ ತಮ್ಮ ಕಚೇರಿಯಲ್ಲಿಯೇ ಇರುವುದು ಗೊತ್ತಾಗುತ್ತದೆ. ಹಾಗೂ ಅವರ ಜೊತೆಗೆ ಮತ್ತೊಬ್ಬ ಅಧಿಕಾರಿ ಕೂಡ ಇರುವುದು ಕಂಡು ಬಂದಿದೆ. 

ಕೆಲವು ದಿನಗಳ ಹಿಂದೆ ರಷ್ಯಾದ ರಾಜಕಾರಣಿ ವ್ಯಾಚೆಸ್ಲಾವ್ ವೊಲೊಡಿನ್ ಅವರು ಝೆಲೆನ್ಸ್ಕಿ ಪೋಲೆಂಡ್ ಗೆ ಪಲಾಯನ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು.