ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ಸುದೀಪ್ ಅವರು ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದಾರೆ. ನಾನು ಹೋಗುತ್ತಿದ್ದೇನೆ. ನಾನು ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದಿದ್ದಾರೆ.
ಸುದೀಪ್ ಅವರು ತಮ್ಮ ಗೆಳೆಯ ಹಾಗೂ ಮ್ಯಾನೇಜರ್ ಜಾಕ್ ಮಂಜು ಪರವಾಗಿ ಟಿಕೆಟ್ ಕೇಳಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಯಾರ ಪರ ಕೂಡ ನಾನು ಟಿಕೆಟ್ ಕೇಳಿಲ್ಲ. ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ನಾನು ದೊಡ್ಡವನಲ್ಲ. ನಮ್ಮವರಿಗೋಸ್ಕರ ಕೆಲವು ನಿಲುವು ತೆಗೆದುಕೊಳ್ಳಬೇಕಾಗುತ್ತದೆ’ ಎಂದಿದ್ದಾರೆ ಸುದೀಪ್.










