ನಟಿ ಪೂನಂ ಪಾಂಡೆ ಅವರು ಸತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದರೆ, ಪೂನಂ ಪಾಂಡೆ ಬದುಕಿದ್ದಾರೆ. ತಾವು ಸುಳ್ಳು ಹೇಳಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ನಟಿ ಪೂನಂ ಪಾಂಡೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಇದೀಗ ಪೂನಂ ಬದುಕಿರುವ ಸುದ್ದಿಯನ್ನು ಸ್ವತಃ ಪೂನಂ ಅವರೇ ನೀಡಿದ್ದಾರೆ. ತಾನು ಬದುಕಿದ್ದೇನೆ. ಹಾಗೆ ಮೆಸೇಜ್ ಮಾಡಲು ಕಾರಣವಿದೆ. ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹಾಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವೀಡಿಯೋ ಮೂಲಕ ಹೇಳಿದ್ದಾರೆ.
ಪೂನಂ ಬದುಕಿರುವ ಸಮಾಚಾರ ತಿಳಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಜಗತ್ತನ್ನೇ ಫೂಲ್ ಮಾಡಿದ ಪೂನಂರನ್ನು ಕೆಲವರು ತರಾಟೆಗೂ ತೆಗೆದುಕೊಂಡಿದ್ದಾರೆ. ಏನೇ ಇರಲಿ.. ಈ ಮಾರ್ಗದ ಮೂಲಕ ಜಾಗೃತಿ ಮೂಡಿಸುವುದು ತರವಲ್ಲ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ.
ಸಾವಿನ ವಿಚಾರದಲ್ಲಿ ಸುಳ್ಳು ಸುದ್ದಿ ಹರಡಿ ಜನರ ಭಾವನೆ ಜೊತೆ ಚೆಲ್ಲಾಟ ಆಡಬಾರದು. ಇದು ಗಂಭೀರ ವಿಚಾರ. ಜೊತೆಗೆ ಪೂನಂ ಪಾಂಡೆ ಸಾವಿನ ಸುಳ್ಳಿನಿಂದ ಇತರೆ ಗರ್ಭಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯರು ಕೂಡ ಶಾಕ್ ಗೆ ಒಳಗಾಗಿರುತ್ತಾರೆ. ಹೀಗಾಗಿ ಈ ರೀತಿ ಸುಳ್ಳು ಸುದ್ದಿ ಹರಡಿಸಿ ಗಿಮಿಕ್ ಮಾಡಿದ ಪೂನಂ ವಿರುದ್ಧ ಕ್ರಮ ತಗೆದುಕೊಳ್ಳಿ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.










