ನಾನು ರೈತನ ಮಗಳು, ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುವೆ : ಶೋಭಾ ಕರಂದ್ಲಾಜೆ.

91
firstsuddi

ನವದೆಹಲಿ : ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ಮತ್ತು ರೈತರ ಅಭಿವೃದ್ಧಿ ರಾಜ್ಯ ಖಾತೆ ಹೊಣೆ ನೀಡಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ನನಗೆ ನೀಡಲಾಗಿದೆ. ನಾನು ರೈತನ ಮಗಳು. ರೈತರ ನೋವು ನನಗೆ ತಿಳಿದಿದೆ. ಅವರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ. ಸರ್ಕಾರದ ಪ್ರತಿಯೊಂದು ಲಾಭ ಹಾಗೂ ವಿವಿಧ ಯೋಜನೆಗಳು ಅನ್ನದಾತರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.